ಇಳಕಲ್ :- ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಪಾಲ್ಗೊಂಡು ಸಭೆಯಲ್ಲಿ ನಗರಾಭಿವೃದ್ಧಿ, ಸ್ವಚ್ಛತೆ, ಟ್ರಾಫಿಕ್ ನಿರ್ವಹಣೆ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡಸಿದರು.
ಶಾಸಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಬಡವರ ಹಕ್ಕುಪತ್ರ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಿದರು. “ಹಕ್ಕುಪತ್ರ ನೋಂದಣಿ ನಾಳೆಯಿಂದಲೇ ಪ್ರಾರಂಭವಾಗಬೇಕು, ಇಲ್ಲದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತೇನೆ,” ಎಂದು ಶಾಸಕರು ಎಚ್ಚರಿಸಿದರು.
ಅವರು ಅಕ್ರಮವಾಗಿ ಪಡೆದ ಮನೆಗಳನ್ನು ರದ್ದುಪಡಿಸಿ, ಅವುಗಳನ್ನು ಬಡವರಿಗೆ ನೀಡುವಂತೆ ಹೇಳಿದ್ದಾರೆ. ಬಡವರ ಹಾಗೂ ನಗರದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಶಾಸಕರು ಸ್ಪಷ್ಟ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಧಾರಣಿ ಮುರಗೇಶ್ ಸಂಗಮ್, ಉಪಾಧ್ಯಕ್ಷರಾದ ಕಾಳಮ್ಮ ಜಕ್ಕ, ನಗರಸಭೆ ಸದಸ್ಯರು, ಪೌರಾಯುಕ್ತರು ಶ್ರೀನಿವಾಸ್ ಜಾದವ್ ಹಾಗೂ ನಗರಸಭೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.



