ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯ ರಥ ಇಳಕಲ್ ನಗರಕ್ಕೆ ಭವ್ಯವಾಗಿ ಆಗಮಿಸಿತು. ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ವೀರರಾಣಿ ಕಿತ್ತೂರು ಚೆನ್ನಮ್ಮ ಬಳಗದ ಅಧ್ಯಕ್ಷ ವಿನೋದ ಬಾರಿಗಿಡದ ಸೇರಿದಂತೆ ನಗರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಪೂಜೆ ಸಲ್ಲಿಸಿ, ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಗೆ ಹಾರ ಹಾಕಿ ಸ್ವಾಗತಿಸಿದರು. ತಾಲ್ಲೂಕು ಆಡಳಿತದ ವತಿಯಿಂದ ಅಮರೇಶ ಪಮ್ಮಾರ ರಥಯಾತ್ರೆಗೆ ಗೌರವಪೂರ್ವಕ ಸ್ವಾಗತ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಅಧಿಕಾರಿಗಳು ಮತ್ತು ಬಳಗದ ಸದಸ್ಯರು ಉಪಸ್ಥಿತರಿದ್ದರು.



